ನಾಳೆಯಿಂದ (14) ಒಂದು ವಾರ ಕಾಲ ಕರ್ನಾಟಕದಲ್ಲಿ ಮಾಲ್, ಸಿನಿಮಾ ಥಿಯೇಟರ್, ಎಲ್ಲ ಸಮಾರಂಭಗಳು ಬಂದ್

ಮಡಿಕೇರಿ TOC:- ಕೊರೊನಾ ವೈರಸ್ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ನಾಳೆಯಿಂದ ಒಂದು ವಾರ ಕಾಲ ಕರ್ನಾಟಕದಲ್ಲಿ ಮಾಲ್, ಸಿನಿಮಾ ಥಿಯೇಟರ್, ಎಲ್ಲ ಸಮಾರಂಭಗಳು ಬಂದ್ ಆಗಲಿದೆ.
ಕೊರೊನಾ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಇಂದು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ತುರ್ತು ಸಭೆ ನಡೆಯಿತು. ಸಭೆಯ ಬಳಿಕ ಮಾಲ್, ಚಿತ್ರ ಮಂದಿರ, ಮದುವೆ, ಸಮ್ಮರ್, ನೈಟ್ ಕ್ಲಬ್, ಸ್ವಿಮ್ಮಿಂಗ್ ಫುಲ್, ನಿಶ್ಚಿತಾರ್ಥ, ನಾಮಕರಣ, ಸಭೆ ಸಮಾರಂಭ ಜಾತ್ರೆ ಎಲ್ಲ ಒಂದು ವಾರ ಕಾಲ ನಿಲ್ಲಿಸಲು ಸೂಚನೆ ನೀಡಲಾಗಿದೆ. ಎಲ್ಲ ವಿವಿಗಳು ಬಂದ್ ಆಗಲಿದ್ದು, ಸಾಧ್ಯವಾದಷ್ಟು ಪ್ರವಾಸ ಮಾಡುವುದನ್ನು ರದ್ದು ಮಾಡಬೇಕೆಂದು ಸರ್ಕಾರ ಕೇಳಿಕೊಂಡಿದೆ.
ಮುಂದಿನ ವಾರ ನಡೆಯಬೇಕಿದ್ದ ಎಲ್ಲಾ ಪರೀಕ್ಷೆ ಮುಂದೂಡಿಕೆಯಾಗಲಿದೆ. ಎಸ್ ಎಸ್ ಎಲ್ ಸಿ ಇತರೆ ಪರೀಕ್ಷೆಗಳು ಎಂದಿನಂತೆ ನಡೆಯಲಿದೆ. ಐಟಿ ಯವರಿಗೆ ವರ್ಕ್ ಫ್ರಂ ಹೋಮ್ ಮಾಡಲು ಈಗಾಗಲೇ ಸೂಚನೆ ನೀಡಿದ್ದೇವೆ. ಅಧಿವೇಶನ ಎಂದಿನಂತೆ ನಡೆಯುತ್ತದೆ. ಸರ್ಕಾರಿ ಕಚೇರಿಗಳು ಎಂದಿನಂತೆ ನಡೆಯುತ್ತವೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು.
ನಾಳೆಯಿಂದ ಒಂದು ವಾರ ಕರ್ನಾಟಕ ಕಂಪ್ಲೀಟ್ ಬಂದ್. ಮಾಲ್, ಥಿಯೇಟರ್, ನೈಟ್ ಕ್ಲಬ್, ಪಬ್ ಬಂದ್. ಮದುವೆ, ಸಮ್ಮರ್ ಕ್ಯಾಂಪ್, ಸ್ವಿಮ್ಮಿಂಗ್ ಪೂಲ್, ಎಂಗೇಜ್ ಮೆಂಟ್, ನಾಮಕರಣ ಎಲ್ಲಾ ಒಂದು ವಾರ ಬಂದ್. ಎಲ್ಲಾ ವಿವಿಗಳು, ಎಲ್ಲಾ ಪರೀಕ್ಷೆ ಮುಂದೂಡಿಕೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ
ಇಂದು ತೆಗೆದುಕೊಂಡ ನಿರ್ಧಾರ ಇಡಿ ರಾಜ್ಯಕ್ಕೆ ಅನ್ವಯವಾಗಲಿದೆ. ಸಾರ್ವಜನಿಕ ಹಿತದೃಷ್ಟಿಯಿಂದ ಈ ತೀರ್ಮಾನವನ್ನು ಕೈಗೊಂಡಿದ್ದೇವೆ ಎಂದು ಸಿಎಂ ತಿಳಿಸಿದರು.
Previous Post
Next Post

0 Post a Comment: