ಮಾ. 22 ರಂದು ನೆಲಜಿಯಲ್ಲಿ ತೆಂಗಿನ ಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆ

       ಮಡಿಕೇರಿ TOC: ನೆಲಜಿ ಗ್ರಾಮದ ಅಂಬಲ ಮಹಿಳಾ ಸಮಾಜದ ವತಿಯಿಂದ ಇದೇ ಮೊದಲ ಬಾರಿಗೆ ಜಿಲ್ಲಾಮಟ್ಟದ ಮುಕ್ತ ತೆಂಗಿನಕಾಯಿಗೆ ಗುಂಡು ಹೊಡೆಯುವ ಕಾರ್ಯಕ್ರಮವನ್ನು ಮಾ. 22 ರಂದು ಹಮ್ಮಿಕೊಳ್ಳಲಾಗಿದೆ ಎಂದು ಸಮಾಜದ ಅಧ್ಯಕ್ಷೆ ಮಣವಟ್ಟೀರ ಕಮಲ ಬೆಳ್ಯಪ್ಪ ಮತ್ತು ಅಪ್ಪುಮಣಿಯಂಡ ಡೇಸ್ಸಿ ಸೋಮಣ್ಣ ತಿಳಿಸಿದರು.
ಪ್ರವಾಸಿ ಮಂದಿರದಲ್ಲಿ ಕರೆಯಲಾಗಿದ್ದ ಗೋಷ್ಟಿಯಲ್ಲಿ ಅವರು ಮಾತನಾಡಿದರು. ನೆಲಜಿ ಗ್ರಾಮದ ಅಂಬಲ ಪ್ರಾಥಮಿಕ ಶಾಲಾ ಮೈದಾನದಲ್ಲಿ ಕಾರ್ಯಕ್ರಮವನ್ನು ಆಯೋಜಿಸಿದಲ್ಲಿ ಗಂಡು, ಹೆಣ್ಣು ಬೇಧವಿಲ್ಲದೆ ಮುಕ್ತವಾಗಿ ಜಿಲ್ಲೆಯ ಜನರು ಪಾಲ್ಗೊಳ್ಳಬಹುದಾಗಿದೆ ಎಂದರು.
ವಿಜೇತರಿಗೆ ರೂ. 10 ಸಾವಿರ ನಗದು ಹಾಗೂ ಆಕರ್ಷಕ ಟ್ರೋಫಿ, ದ್ವಿತೀಯ ಸ್ಥಾನ ಪಡೆದವರಿಗೆ ರೂ. 5 ಸಾವಿರ ನಗದು ಟ್ರೋಫಿ ಮತ್ತು ತೃತೀಯ ಸ್ಥಾನ ಪಡೆದವರಿಗೆ ರೂ. 3 ಸಾವಿರ ಮತ್ತು ಟ್ರೋಫಿಯನ್ನು ನೀಡಲಾಗುವುದು ಎಂದರು.
Previous Post
Next Post

0 Post a Comment: