ಸೋಮವಾರಪೇಟೆಯಲ್ಲಿ ಅನಧಿಕೃತವಾಗಿ ಮರಳು ಸಾಗಾಟ : ಇಬ್ಬರ ಬಂಧನ : ಮಾಲು ಸಹಿತ ಲಾರಿ ವಶ

      ಮಡಿಕೇರಿ TOC : ಯಾವುದೇ ಅಧಿಕೃತ ರಹದಾರಿ ಪಡೆಯದೇ ಸೋಮವಾರಪೇಟೆ ತಾಲೂಕಿನ ಕೂತಿ ಗ್ರಾಮದ ಕಡೆಯಿಂದ ಸೋಮವಾರಪೇಟೆ ಪಟ್ಟಣದ ಕಡೆಗೆ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಪ್ರಕರಣವನ್ನು ಪತ್ತೆ ಹಚ್ಚಿರುವ ಕೊಡಗು ಜಿಲ್ಲಾ ಅಪರಾಧ ಪತ್ತೆ ದಳ, ಮರಳು ತುಂಬಿದ್ದ ಲಾರಿ ಸಹಿತ ಇಬ್ಬರು ಆರೋಪಿಗಳನ್ನು ಬಂಧಿಸಿದೆ. ಆರೋಪಿಗಳು ಮತ್ತು ವಶಕ್ಕೆ ಪಡೆದ ಸ್ವತ್ತುಗಳನ್ನು ಸೋಮವಾರಪೇಟೆ ಪಟ್ಟಣ ಪೊಲೀಸರಿಗೆ ಒಪ್ಪಿಸಲಾಗಿದೆ.
ಕೂತಿ ಗ್ರಾಮದಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿರುವ ಬಗ್ಗೆ ಜಿಲ್ಲಾ ಅಪರಾಧ ಪತ್ತೆ ದಳಕ್ಕೆ ಖಚಿತ ಮಾಹಿತಿ ಲಭಿಸಿತ್ತು. ಲಾರಿಯನ್ನು ನಿಲ್ಲಿಸಿ ದಾಖಲೆಯನ್ನು ಪರಿಶೀಲಿಸಿದ ಸಂದರ್ಭ ಮರಳು ಸಾಗಿಸಲು ಯಾವುದೇ ರಹದಾರಿ ಇಲ್ಲದಿರುವುದು ಕಂಡು ಬಂದಿದೆ. ಬಳಿಕ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಸಿ.ಟಿ. ದರ್ಶನ್ ಮತ್ತು ಕೆ.ಎಸ್. ಪ್ರೀತಮ್ ಅವರುಗಳನ್ನು ಬಂಧಿಸಿ, ಲಾರಿ ಮತ್ತು ಮರಳನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳ ವಿರುದ್ದ ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.
ಕೊಡಗು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ. ಸುಮನ ಮಾರ್ಗದರ್ಶನದಲ್ಲಿ ಜಿಲ್ಲಾ ಅಪರಾಧ ಪತ್ತೆ ದಳದ ಪ್ರಭಾರ ವೃತ್ತ ನಿರೀಕ್ಷಕ ಹೆಚ್.ಬಿ. ಚಂದ್ರಶೇಖರ್, ಸಿಬ್ಬಂದಿಗಳಾದ ಕೆ.ವೈ. ಹಮೀದ್, ಕೆ.ಎಸ್. ಅನೀಲ್ ಕುಮಾರ್, ವಿ.ಜಿ.ವೆಂಕಟೇಶ್, ಕೆ.ಆರ್. ವಸಂತ, ಎಂ.ಎನ್. ನಿರಂಜನ್ ಹಾಗೂ ಚಾಲಕ ಕೆ.ಎಸ್. ಶಶಿಕುಮಾರ್ ಅವರುಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
Previous Post
Next Post

0 Post a Comment: