ಕೊರೊನಾ ವೈರಸ್ ಕುರಿತು ಜಾಗೃತಿ

            ಮಡಿಕೇರಿ TOC:-ಸಾರ್ವಜನಿಕ ಶಿಕ್ಷಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಂತ ಮೈಕಲರ ಪ್ರಾಥಮಿಕ ಶಾಲೆ ಸಹಯೋಗದೊಂದಿಗೆ ನಗರದ ಸಂತ ಮೈಕಲರ ವಿದ್ಯಾ ಸಂಸ್ಥೆಯಲ್ಲಿ ಕೊರೋನಾ ವೈರಸ್ ಸಂಬಂಧಿಸಿದಂತೆ ಮುನ್ನೆಚ್ಚರಿಕೆ ವಹಿಸುವಂತೆ ಮಾಹಿತಿ ನೀಡಲಾಯಿತು. 
ಜಿಲ್ಲಾ ಆರ್.ಸಿ.ಎಚ್ ಅಧಿಕಾರಿಗಳಾದ ಡಾ. ಗೋಪಿನಾಥ್‍ರವರು ಅವರು ಕೊರೊನಾ ಹರಡುವಿಕೆ ಮತ್ತು ವಹಿಸಬೇಕಾದ ಜಾಗೃತಿ ಕ್ರಮದ ಬಗ್ಗೆ ಉಪನ್ಯಾಸ ನೀಡಿದರು.
ತೀವ್ರ ಜ್ವರದ ಪ್ರಾರಂಭ, ನೆಗಡಿ, ಕೆಮ್ಮು, ಭೇದಿ ಹಾಗೂ ಉಸಿರಾಟದ ತೊಂದರೆಗಳಂತಹ ರೋಗ ಲಕ್ಷಣಗಳಿದ್ದರೆ, ಆಗ ತ್ವರಿತವಾಗಿ ವೈದ್ಯಕೀಯ ಚಿಕಿತ್ಸೆ ಪಡೆಯಿರಿ ಎಂದು ಸಲಹೆ ನೀಡಿದರು.
  ಕೆಮ್ಮುವಾಗ ಮತ್ತು ಸೀನುವಾಗ ಬಾಯಿಗೆ ಕರವಸ್ತ್ರ ಅಡ್ಡಹಿಡಿಯುವ ಮೂಲಕ ಮತ್ತು ನಿಮ್ಮ ಕೈಯನ್ನು ಚೆನ್ನಾಗಿ ಆಗಾಗ ತೊಳೆದುಕೊಳ್ಳುವ ಮೂಲಕ ಸರಳ ನೈರ್ಮಲ್ಯವನ್ನು ಅಭ್ಯಾಸ ಮಾಡಿಕೊಳ್ಳಿ ಹಾಗೂ ಮಾಸ್ಕ್‍ಗಳನ್ನು ಧರಿಸಬೇಕು. ಕೆಮ್ಮುವಾಗ ಮತ್ತು ಸೀನುವಾಗ ಬಾಯಿಗೆ ಕರವಸ್ತ್ರ ಅಡ್ಡಹಿಡಿಯುವ ಮೂಲಕ ಮತ್ತು ನಿಮ್ಮ ಕೈಯನ್ನು ಚೆನ್ನಾಗಿ ಆಗಾಗ ತೊಳೆದುಕೊಳ್ಳುವ ಮೂಲಕ ಸರಳ ನೈರ್ಮಲ್ಯವನ್ನು ಅಭ್ಯಾಸ ಮಾಡಿಕೊಳ್ಳ ಬೇಕು. ಕೆಮ್ಮುವಾಗ ಅಥವಾ ಸೀನುವಾಗ ಬಾಯಿಯನ್ನು ಮುಚ್ಚಿಕೊಳ್ಳಬೇಕು. ಅನಾರೋಗ್ಯದಿಂದಿರುವ ಅಥವಾ ಕೆಮ್ಮು ಮತ್ತು ನೆಗಡಿ ಇತ್ಯಾದಿ ಅನಾರೋಗ್ಯದ ಲಕ್ಷಣಗಳನ್ನು ಹೊಂದಿರುವ ಜನಗಳೊಂದಿಗೆ ನಿಕಟ ಸಂಪರ್ಕ ಹೊಂದಬಾರದು. ಪ್ರಾಣಿಗಳ ನೇರ ಸಂಪರ್ಕವನ್ನು ಹಾಗೂ ಬೇಯಿಸದ ಕಚ್ಚಾ ಮಾಂಸ ಸೇವನೆಯನ್ನು ಮಾಡಬೇಡಿ ಎಂಬ ವಿಚಾರಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. 
ಮುಖ್ಯ ಶಿಕ್ಷಕರಾದ ಸಿಸ್ಟರ್ ಮೋಲಿ, ಸಿಸ್ಟರ್ ಪ್ರತಿಮಾ, ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಶಿಕ್ಷಕ ವೃಂದದವರು ಮತ್ತು ವಿದ್ಯಾರ್ಥಿಗಳು ಇತರರು ಇದ್ದರು.
Previous Post
Next Post

0 Post a Comment: